ಕೊಟ್ಟಿರುವ ಜೀವನ ಚರಿತ್ರೆಯನ್ನು ಓದಿ, ಅರ್ಥೈಸಿಕೊಂಡು, ಪ್ರಶ್ನೆ ಸಂಖ್ಯೆ 7 ರಿಂದ 9 ರವರೆಗೆ ಉತ್ತರಿಸಿ.
ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ – ಲಕ್ಷ್ಮಮ್ಮ ದಂಪತಿಗಳಿಗೆ ೧೦ -೧೦ -೧೯೦೨ ರಲ್ಲಿ ಜನಿಸಿದರು. ಆಡು ಮುಟ್ಟಾದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿ ಸಲಗದಂತೆ ನಡೆದರೂ. ವ್ಯಾಪಾರ ಮಾಡಿದರು. ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದರು. ಚಲನಚಿತ್ರ ಮಾಡಿದರು. ಯಕ್ಷಗಾನ ಪ್ರಯೋಗಗಳನ್ನು ನಡೆಸಿದರು. ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದರು. ೧೯೫೮ ರಲ್ಲಿ ಇವರ ಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ. ೪೪ ಕಾದಂಬರಿ, ೧೪ ನಾಟಕ, ೩ ಕಥಾ ಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು ೫ ಆತ್ಮಕಥೆ-ಜೀವನಚರಿತ್ರೆಗಳು, ೨೫ ಮಕ್ಕಳ ಸಾಹಿತ್ಯ ಇತ್ಯಾದಿ ೧೫೦ ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ ಬಯಲಾಟ, ಸಿರಿ ಕನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚು ಮನಸ್ಸಿನ ಹತ್ತು ಮುಖಗಳು, ಮೂಕಜ್ಜಿಯ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.
7. ಶಿವರಾಮ ಕಾರಂತರು ಜನಿಸಿದ್ದು
- ೧೦ -೧೦ -೧೯೦೨ ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ
- ೦೧ – ೦೧ -೧೯೦೨ ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ
- ೦೧ – ೦೧ -೧೯೦೨ ರಲ್ಲಿ ಉತ್ತರ ಕನ್ನಡದ ಜಿಲ್ಲೆಯಲ್ಲಿ
- ೧೦ -೧೦ -೧೯೦೨ ರಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ
8. ಕಾರಾಂತರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಸ್ವೀಡನ್ ಪ್ರಶಸ್ತಿಯನ್ನು ತಂದು ಕೊಟ್ಟ ಕೃತಿ:
- ಮೂಕಜ್ಜಿಯ ಕನಸುಗಳು
- ವಿಚಾರವಾಣಿ
- ಯಕ್ಷಗಾನ ಬಯಲಾಟ
- ಹುಚ್ಚು ಮನಸ್ಸಿನ ಹತ್ತು ಮುಖಗಳು
9. ಕಾರಂತರ ಬಾಲವನ ಹಾಗೂ ಬಾಲ ಪ್ರಪಂಚ ಕೃತಿಯನ್ನು ಗಮನಿಸಿದರೆ ತಿಳಿದು ಬರುವ ಅಂಶ:
- ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು
- ಆಟಗಳ ಅಧ್ಯಯನಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು
- ವನಗಳ ಅಧ್ಯಯನ ಮುಖ್ಯ ಉದ್ದೇಶವಾಗಿತ್ತು
- ಪ್ರಪಂಚದ ಅಳಿವು ಉಳಿವಿನ ಬಗ್ಗೆ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ಉತ್ತರ ಮತ್ತು ವಿವರಣೆ
7- Option : D
೧೦ -೧೦ -೧೯೦೨ ರಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ
8- Option : C
ಯಕ್ಷಗಾನ ಬಯಲಾಟ
9- Option : A
ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು